ಗಾಯಕರು : ಡಾ. ರಾಜ್ ಕುಮಾರ್. ಸಾಹಿತ್ಯ : ಚಿ. ಉದಯ್ ಶಂಕರ್
ಎಂಥ ಅಂದ ಎಂಥ ಚಂದ ಶಾರದಮ್ಮ ನೀನು ಎಂಥ ಅಂದ ಎಂಥ ಚಂದ ಶಾರದಮ್ಮ ನಿನ್ನ ನೋಡಲೆರಡು ಕಣ್ಣು ನನಗೆ ಸಾಲದಮ್ಮ ||
ಎಂಥ ಅಂದ ಎಂಥ ಚಂದ ಶಾರದಮ್ಮ ನಿನ್ನ ನೋಡಲೆರಡು ಕಣ್ಣು ನನಗೆ ಸಾಲದಮ್ಮ ||
ಇನ್ನು ಇನ್ನು ನೋಡುವಾಸೆ ತುಂಬಿತಮ್ಮ ಇನ್ನು ಕೋಟಿ ಜನುಮ ಬರಲಿ ನನಗೆ ಸಾಲದಮ್ಮ||ಇನ್ನು|| ಅಭಯ ಹಸ್ತ ನೋಡಿ ಜೀವ ಕುಣಿಯಿತಮ್ಮ ಅಭಯ ಹಸ್ತ ನೋಡಿ ಜೀವ ಕುಣಿಯಿತಮ್ಮ ನಿನ್ನ ಪಾದಕಮಲದಲ್ಲಿ ಶಿರವು ಬಾಗಿತಮ್ಮ ನಿನ್ನ ಪಾದಕಮಲದಲ್ಲಿ ಶಿರವು ಬಾಗಿತಮ್ಮ ||
ಎಂಥ ಶಕ್ತಿ ನಿನ್ನಲಿದೆಯೋ ಶಾರದಮ್ಮ ನಿನ್ನ ನೋಡಿ ಹಾಡೋ ಆಸೆ ಬಂದಿತಮ್ಮ ಎಂಥ ಶಕ್ತಿ ನಿನ್ನಲಿದೆಯೋ ಶಾರದಮ್ಮ || ನಿನ್ನ ನೋಡಿ ಹಾಡೋ ಆಸೆ ಬಂದಿತಮ್ಮ ರತ್ನದಂಥ ಮಾತುಗಳನೆ ಆಡಿಸಮ್ಮ ಒಳ್ಳೆ ರತ್ನದಂಥ ಮಾತುಗಳನೆ ಆಡಿಸಮ್ಮ || ರಾಗ ಭಾವ ಭಕ್ತಿ ತುಂಬಿ ಹಾಡಿಸಮ್ಮ ಒಳ್ಳೆ ರಾಗ ಭಾವ ಭಕ್ತಿ ತುಂಬಿ ಹಾಡಿಸಮ್ಮ ||
ಅಲ್ಲಿ ಇಲ್ಲಿ ಓಡೋ ಮನಸು ನನ್ನದಮ್ಮಾ ಬೇಗ ಬಂದು ನೆಲೆಸು ಅಲ್ಲಿ ಶಾರದಮ್ಮ || ಅಲ್ಲಿ || ಬೇರೆ ಏನು ಬೇಕು ಎಂದು ಕೇಳೇನಮ್ಮ ನಿನ್ನ ಬೇರೆ ಏನು ಬೇಕು ಎಂದು ಕೇಳೆನಮ್ಮ ನಿನ್ನ ವೀಣೆ ತಂತಿ ಮಾಡಿ ನುಡಿಸು ಶಾರದಮ್ಮ ನನ್ನ ವೀಣೆ ತಂತಿ ಮಾಡಿ ನುಡಿಸು ಶಾರದಮ್ಮ ||ನನ್ನ ||
This song is dedicated to Goddess Sharadamba sung by the veteran, Karnataka rathna Dr. Rajkumar, lyrics is by Shri.Chi Udayashankar… This song describes the beauty of Goddess Sharadamba, who is the goddess of wisdom and knowledge in Hinduism..
Lyrics in English:
Entha anda entha chanda Sharadamma neenu Entha anda entha chanda Sharadamma ninna ninna nodaleradu kannu nanage saaladamma||